ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ, ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

