Breaking News

ನನ್ನ ಬಲಿದಾನವಾದ್ರೂ ಸರಿ, ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಬಿಡೋದಿಲ್ಲ: ಮುತಾಲಿಕ್

ಧಾರವಾಡ: ರಾಜ್ಯದ ಬಿಜೆಪಿ ಸರ್ಕಾರ 10 ಮುಸ್ಲಿಂ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವ ಕ್ರಮವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ನನ್ನ ಬಲಿದಾನವಾದರೂ ಸರಿ. ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಒಪ್ಪುವುದಿಲ್ಲ. ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ವಿರೋಧ ಮಾಡುತ್ತೇನೆ. ಈ ಸಂಬಂಧ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಮುಸ್ಲಿಂರಿಗೆ ಸಪೋರ್ಟ್ ಮಾಡಿದ ಪರಿಣಾಮವಾಗಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಂವಿಧಾನ ವಿರೋಧಿ ನೀತಿಗೆ ಕಾಂಗ್ರೆಸ್ ಸಪೋರ್ಟ್ ಮಾಡುತ್ತಿದೆ. ಅದರಂತೆ ಬಿಜೆಪಿ ಕೂಡ 10 ಮುಸ್ಲಿಂ ಕಾಲೇಜುಗಳನ್ನು ಪ್ರತ್ಯೇಕವಾಗಿ ಕೊಡುವುದು ತಪ್ಪು. ಹಿಜಾಬಿನ ಸಲುವಾಗಿ ಮುಸ್ಲಿಂ ಕಾಲೇಜುಗಳನ್ನು ಕೊಡುವುದು ತಪ್ಪು. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *