ಕೋಲಾರ: ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಠಾಣೆಯಲ್ಲೇ ಮೃತಪಟ್ಟಿರುವ ಘಟನೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಸುರೇಶ್ (48) ಮೃತಪಟ್ಟ ಮುಖ್ಯಪೇದೆ. ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಸುರೇಶ್ ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ, ಅಷ್ಟರಲ್ಲಾಗಲೇ ಸುರೇಶ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಧರಣಿದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

