Breaking News

ಕರ್ತವ್ಯಲೋಪ ಐವರು ಪೊಲೀಸರು ಅಮಾನತು : ಆದೇಶ ಹಿಪಂಡೆಯುವಂತೆ ಪ್ರತಿಭಟನೆ


ಚಾಮರಾಜನಗರ: ಜೀಪಿನಿಂದ ಹಾರಿ ಆರೋಪಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸರು ಅಮಾನತುಗೊಂಡಿದ್ದಾರೆ.

ಯಳಂದೂರು ಸಿಪಿಐ ಶಿವಮಾದಯ್ಯ, ಪಿಎಸ್‌ಐ ಮಹದೇವಗೌಡ, ಎಎಸ್‌ಐ ಚೆಲುವರಾಜ್, ಹೆಡ್ ಕಾನ್ಸ್‌ಟೇಬಲ್ ಭದ್ರಮ್ಮ, ಕಾನ್ಸ್‌ಟೇಬಲ್ ಸೋಮಶೇಖರ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ. ಆರೋಪಿ ಬಂಧಿಸಿ ಕರೆತರುವಾಗ ಕರ್ತವ್ಯಲೋಪ ಎಸಗಿದ್ದಾರೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಅಮಾನತು ಆದೇಶ ಹೊರಬಿದ್ದಿದೆ.

ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ನಿಂಗರಾಜು(21) ಎಂಬಾತನ ವಿರುದ್ಧ ಅಪ್ರಾಪ್ತೆ ಅಪಹರಿಸಿದ ದೂರು ದಾಖಲಾಗಿತ್ತು. ಮಂಗಳವಾರ ಆತನನ್ನು ಪೊಲೀಸರು ಠಾಣೆಗೆ ಕರೆದೊಯ್ಯವಾಗ ಪರಾರಿಯಾಗಲು ಜೀಪಿನಿಂದ ಲಿಂಗರಾಜು ಹಾರಿ ತೀವ್ರವಾಗಿ ಗಾಯಗೊಂಡಿದ್ದಾನೆ‌. ಬಳಿಕ, ಆಸ್ಪತ್ರೆಗೆ ರವಾನಿಸಲಾಯಿತಾದರೂ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅಮಾನತು ಆದೇಶಕ್ಕೆ ದಲಿತ ಸಂಘಟನೆಗಳು ಆಕ್ರೋಶಗೊಂಡು ಇಂದು ಪ್ರತಿಭಟನೆ ನಡೆಸಿದ್ದಾರೆ‌.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *