Breaking News

ಬೆಳ್ಳಂಬೆಳಗ್ಗೆ ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ: ಖಾಸಗಿ ಬಸ್ ಒಂದು ಬ್ರಿಡ್ಜ್ ಮೇಲಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ಕು ಜನರಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳ್ಳಿಗ್ಗೆ 6.50ರ ಸುಮಾರಿಗೆ ಬೈಪಾಸ್ ನ ನೇಕಾರ ನಗರ ಬಳಿ ನಡೆದಿದೆ.

ಬೆಂಗಳೂರಿನಿಂದ ಗುಜರಾತ್ ಕಡೆ ಹೊರಟಿದ್ದ ಖಾಸಗಿ ಬಸ್ ಅವಳಿನಗರ ಬೈಪಾಸ್‌ನ ನೇಕಾರ ನಗರದ ಬ್ರಿಡ್ಜ್ಮೇಲಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ

ಬಸ್ ನಲ್ಲಿದ್ದ ಚಾಲಕ ಸೇರಿ ಹಲವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದಾಗ ಎದುರುಗಡೆಯಿಂದ ಏಕಾಏಕಿ ಇನ್ನೊಂದು ವಾಹನ ಬಂದ ಪರಿಣಾಮ ಅಪಘಾತ ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದ್ದು,ಅದೃಷ್ಟವಶಾತ್ ಯಾರಿಗೂ ಕೂಡಾ ಪ್ರಾಣ ಹಾನಿ ಸಂಭವಿಸಿಲ್ಲ, ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *