ಧಾರವಾಡ: ಟಿಪ್ಪರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಧಾರವಾಡದ ಬಾರಾಕೊಟ್ರೆ ಬಳಿಯ ಪವನ್ ಸ್ಕೂಲ್ ಎದುರುಗಡೆ ಸಂಭವಿಸಿದೆ.
ಇಂದು ಬೆಳಗಿನ ಜಾವ ಈ ಟಿಪ್ಪರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ವಿದ್ಯುತ್ ತಂತಿಗಳು ಲಾರಿ ಮೇಲೆ ಬೀಳದೇ ಇದ್ದಿದ್ದರಿಂದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ವಿದ್ಯುತ್ ತಂತಿಗಳು ಟಿಪ್ಪರ್ ಮೇಲೆ ಬಿದ್ದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

