ಬೆಂಗಳೂರು: ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಅದು ಕ್ರಮೇಣ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಸುರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪೂರ್ವದ ಅಲೆಯಿಂದಾಗಿ ಮುಂದಿನ 4-5 ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪತ್ರಿಕಾ ಪ್ರಕಟಣೆ ತಿಳಿಸಿದೆ. ಡಿಸೆಂಬರ್ 4ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಚಂಡಮಾರುತದ ಚಲನೆ ಕಂಡು ಬರುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಡಿಸೆಂಬರ್ 5ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

