Breaking News

ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಆಸ್ಪತ್ರೆಗೆ ದಾಖಲು



ಬೆಂಗಳೂರು: ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಎಂದೇ ಫೇಮಸ್ ಆಗಿರುವ ಹಿರಿಯ ನಟ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ  ‌ದಾಖಲಾದ ಕೃಷ್ಣ ಜಿ ರಾವ್ ಅವರು ಸದ್ಯ ಐಸಿಯುವಿನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ  ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನು ಸುಸ್ತಾದ ಕಾರಣ ಮಧ್ಯರಾತ್ರಿ ಆಸ್ಪತ್ರೆಗೆ ‌ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣ ಜಿ ರಾವ್ ಅವರು ಶೀಘ್ರ ಚೇತರಿಸಲಿ ಎಂದು ಪ್ರಾರ್ಥಿಸಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *