Breaking News


ಕಾರ್ಮಿಕ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ


ಬೆಂಗಳೂರು : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ‌.

ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ 35 ಸಾವಿರ ರೂ. ಮೀರಿರಬಾರದು.(ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು).

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್‍ನಲ್ಲಿ è WWW.klwbapps.karnataka.gov.in ಅರ್ಜಿ ಸಲ್ಲಿಸಬಹುದು. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ/ಪ.ಪಂ. ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)

ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1 ನೇ ಮತ್ತು 2 ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *