Breaking News

ಮುರುಘಾ ಶ್ರೀಗಳಿಗೆ ಮತ್ತೊಂದು ಶಾಕ್


ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಹಾಲಿ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪದಚ್ಯುತಿಗೊಳಿಸಿ, ಹೊಸ ಪೂರ್ಣಕಾಲೀನ ಪೀಠಾಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡುವ ಕುರಿತು ಚರ್ಚಿಸಲು ವೀರಶೈವ ಸಮುದಾಯದಿಂದ ಇಂದು ಸಭೆ ಕರೆಯಲಾಗಿದೆ.

ಡಾ. ಶಿವಮೂರ್ತಿ ಶಿವಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಡಿಸೆಂಬರ್ 3 ರಂದು ಸಭೆ ಕರೆಯಲಾಗಿದೆ.

ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಮುರುಘಾ ಶರಣರನ್ನು ವಜಾಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *