ಬೆಂಗಳೂರು: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ.ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ. ರೌಡಿಗಳು ಅಥವಾ ಅಪರಾಧ ಹಿನ್ನೆಲೆ ಉಳ್ಳವರಿಗೆ ಸೇರಲು ಪಕ್ಷ ಯಾವುದೇ ಕಾರಣಕ್ಕೂ ಅವಕಾಶ ನೀಡದು. ಈ ವಿಷಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಪಕ್ಷದ ನಿಲುವೇನೆಂದು ಸ್ಪಷ್ಟಪಡಿಸಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

