ಮಧುಗಿರಿ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ನಿರೀಕ್ಷೆಯಿದ್ದು ಸಂಪೂರ್ಣ ಸರ್ಕಾರ ರಚನೆಯಾದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲವನ್ನು ಮನ್ನಾ ಮಾಡಿ ಹೆಣ್ಣು ಮಕ್ಕಳನ್ನು ಋಣಮುಕ್ತರನ್ನಾಗಿ ಮಾಡಲಾಗುವುದೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಪಂಚರತ್ನ ಯೋಜನೆಯ ರಥಯಾತ್ರೆಯೊಂದಿಗೆ ಮಧುಗಿರಿಗೆ ಆಗಮಿಸಿದ ಅವರನ್ನು ಗಡಿಭಾಗದಿಂದಲೂ ಮಹಿಳೆಯರು ಆರತಿ ಮಾಡಿದರೆ ಕಾರ್ಯಕರ್ತರು ಹೂವಿನ ಸುರಿ ಮಳೆಯೊಂದಿಗೆ ಸ್ವಾಗತಿಸಿದರು.
ಪಟ್ಟಣದಲ್ಲಿ ಗ್ರಾಮ ದೇವತೆ ದಂಡಿನ ಮಾರಮ್ಮ ದೇವರ ದರ್ಶನ ಮಾಡಿ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತ ಈ ಕ್ಷೇತ್ರದ ಋಣ ನಮ್ಮ ಮೇಲಿದೆ. ಕಳೆದ ಬಾರಿ ಮಧುಗಿರಿ ಅಭಿವೃದ್ಧಿಗೆ ಮುಂದಾಗುವಾಗಲೇ ನನ್ನ ಸರ್ಕಾರವನ್ನು ಕುತಂತ್ರದಿಂದ ಕಿತ್ತು ಹಾಕಿದರು. ಆದರೂ 25 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದು ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನದ ಜೊತೆಗೆ ಕೈಗಾರಿಕಾ ವಲಯ ಮಂಜೂರು ಮಾಡಿದೆ ಎಂದು ವಿವರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

