Breaking News

ಪಿಎಸ್ ಐ ಹಗರಣ : ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್  ನೋಟಿಸ್ ಜಾರಿ


ಬೆಂಗಳೂರು: ಪಿಎಸ್ಸೈ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್  ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಸೈ ಪರೀಕ್ಷೆ ವೇಳೆ ಕೆಲ ಅಭ್ಯರ್ಥಿಗಳ ಓಎಂಆರ್ ಶೀಟ್ ತಿದ್ದಿಸಿದ್ದಲ್ಲದೇ, ಇನ್ನು ಕೆಲ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಿ ಅಕ್ರಮ ಎಸಗಿರುವ ಆರೋಪ ದಿವ್ಯಾ ಮೇಲಿದೆ.

ಎಪ್ರಿಲ್ 29ರಂದು ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದರು. ದಿವ್ಯಾ ಹಾಗರಗಿ ಅವರು ಪ್ರಕರಣದಲ್ಲಿ 18ನೆ ಆರೋಪಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಕಲಬುರಗಿಯ ಚೌಕ್ಲೀ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‍ಗಳಡಿ ಅಡಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *