Breaking News

ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ಕುರಿತು ಗದ್ದಲ



ಚಿತ್ರದುರ್ಗ: ಡಾ.ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ನೇಮಕ ಕುರಿತು ಮಠದಲ್ಲಿ ಗದ್ದಲಗಳು ಏರ್ಪಟ್ಟಿದೆ ಎಂದು ತಿಳಿದುಬಂದಿದೆ.

ನೂತನ ಪೀಠಾಧಿಪತಿ ನೇಮಕ ಸಂಬಂಧ ನಿನ್ನೆ ವೀರಶೈವ-ಲಿಂಗಾಯತ ಸಮಾಜದ ಸದಸ್ಯರೊಂದಿಗೆ ಸಭೆ ನಡೆಯಿತು. ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಸ್ಮಾರಕದಲ್ಲಿ ಮಾಜಿ ಸಚಿವ ಎಚ್.ಏಕಾಂತಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗದ್ದಲಗಳು ಏರ್ಪಟ್ಟಿದ್ದು ಕಂಡು ಬಂದಿತ್ತು. ಆಡಳಿತಾಧಿಕಾರಿ ನೇಮಕ ವಿಚಾರ ಚರ್ಚೆಗೆ ಬಂದಾಗ ಅದರ ಅಗತ್ಯವಿಲ್ಲ ಎಂದು ಯುವಕ ಕಾರ್ತಿಕ್ ಆಕ್ಷೇಪ ವ್ಯಕ್ತಪಡಿಸಿದರು.

ಇದರಿಂದ ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಸಭೆಯಲ್ಲಿದ್ದ ಕೆಲವರು ಕಾರ್ತಿಕ್ ಎಂಬ ಯುವಕನಿಗೆ ಬೆಂಬಲ ನೀಡಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಏಕಾಂತಯ್ಯ ಅವರು, 30 ಜಿಲ್ಲೆಗಳ ವೀರಶೈವ ಮಹಾಸಭಾ ಸದಸ್ಯರು ಚಿತ್ರದುರ್ಗದಲ್ಲಿ ಪಾದಯಾತ್ರೆ ನಡೆಸಿ ನಂತರ ಮುರುಘಾ ಮಠದ ಮುಂದೆ ಧರಣಿ ನಡೆಸಿ ನೂತನ ಮಠಾಧೀಶರ ನೇಮಕಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು. ಮಠಾಧೀಶರು ಮೂರು ತಿಂಗಳಿನಿಂದ ಜೈಲಿನಲ್ಲಿ ಇರುವುದರಿಂದ ಮಠದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳು ಹಾಗೂ ಮಠದ ವತಿಯಿಂದ ನಡೆಯುವ ಶಿಕ್ಷಣ ಸಂಸ್ಥೆಗಳ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮಠದ ಕಾರ್ಯಚಟುವಟಿಕೆಗಳು ಸುಗಮವಾಗಿ ನಡೆಯಲು ನೂತನ ಮಠಾಧೀಶರ ಅವಶ್ಯಕತೆಯಿದೆ ಎಂದು ತಿಳಿಸಿದರು. ಆಡಳಿತಾಧಿಕಾರಿ ನೇಮಕ ಮಾಡುವಂತೆ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *