Breaking News

ಬಿಸಿಸಿಐ ಯುಎಇ ಘಟಕದ ಅಧ್ಯಕ್ಷ ನಿಧನ

ಮಂಗಳೂರು: ಮೂಲತಃ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿಯ ಪ್ರಸಕ್ತ ದುಬೈಯಲ್ಲಿ ನೆಲೆಸಿದ್ದ ಎಸ್.ಎಂ.ಬಶೀರ್ (50) ಇಂದು ಮಧ್ಯಾಹ್ನ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಳೆದೊಂದು ವರ್ಷದಿಂದ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಕೆಲವು ದಿನಗಳ ಹಿಂದೆ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಕುವೈತ್‌ನಲ್ಲಿ ಉದ್ಯೋಗಿಯಾಗಿದ್ದ ಅವರು ಬಳಿಕ ದುಬೈಯ ಕಂಪೆನಿಯೊಂದರಲ್ಲಿ ಉನ್ನತ ಹುದ್ದೆಯಲ್ಲಿದ್ದರು. ಸಮುದಾಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಸಮಾಜಸೇವೆಯಲ್ಲಿ ಸದಾ ಸಕ್ರಿಯರಾಗಿದ್ದರು. ಬ್ಯಾರೀಸ್ ಛೇಂಬರ್ ಆಫ್ ಕಾಮರ್ಸ್ (ಬಿಸಿಸಿಐ) ಇದರ ಯುಎಇ ಘಟಕದ ಅಧ್ಯಕ್ಷರಾಗಿದ್ದರು. ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್ (ಕೆಕೆಎಂಎ) ಇದರ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *