ಹಾವೇರಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದೂ ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು ಒಂದು ಇತಿಹಾಸ. ಒಬ್ಬ ಮನುಷ್ಯನಿಗೆ ನೂರು ವರ್ಷ ವಯಸ್ಸು ಆಗಬಹುದು. ಆದರೆ ಒಂದು ಸಂಸ್ಥೆ 150 ವರ್ಷವಾದರೆ ಇಲ್ಲಿ ಕಲಿತವರು ಯಾವ ಯಾವ ಸ್ಥಾನದಲ್ಲಿದ್ದಾರೆ ಅನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಸ್ವತಂತ್ರ ಪೂರ್ವದ ಚಿತ್ರವನ್ನು ನಾವು ನೆನಪು ಮಾಡಿಕೊಂಡರೆ, ಆಗ ಶಾಲೆಗಳ ಸಂಖ್ಯೆ ಬಹಳ ವಿರಳ. ಹೀಗಾಗಿ ಅವತ್ತಿನ ನಮ್ಮ ಹಿರಿಯರು ಬಹಳ ದೂರದೃಷ್ಟಿ ಇಟ್ಟುಕೊಂಡು, ಪ್ರಗತಿಪರ ವಿಚಾರವನ್ನಿಟ್ಟುಕೊಂಡು ಈ ಶಾಲೆ ಪ್ರಾರಂಭ ಮಾಡಿದ್ದಾರೆ. ಆ ಶಾಲೆ ಪ್ರಾರಂಭ ಮಾಡಿದ ಹಿರಿಯರಿಗೆ, ಇಲ್ಲಿ ಬಂದು ವಿಧ್ಯರ್ಜನೆ ಮಾಡಿದ ಶಿಕ್ಷಕರಿಗೆ, ಮೊದಲು ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ, ಶಾಲೆ ನಿರ್ಮಾಣಕ್ಕೆ ಮಾಡಿದವರಿಗೆ, ಶಾಲೆಗೆ ಜಾಗ ದಾನ ಮಾಡಿದವರಿಗೆ ನನ್ನ ಕೃತಜ್ಞತೆ ಹೇಳಲು ಬಯಸುತ್ತೇನೆಂದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

