Breaking News


ಗುಜರಾತ್ ವಿಧಾನಸಭಾ ಚುನಾವಣೆಯ : ತಾಯಿ‌ ಆರ್ಶಿರವಾದ ಪಡೆದ ಪ್ರಧಾನಿ


ಹೊಸದಿಲ್ಲಿ: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ  ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾಯಿಸಲಿದ್ದಾರೆ. ಮತದಾನಕ್ಕೆ ರವಿವಾರವೇ ಹುಟ್ಟೂರಿಗೆ ಆಗಮಿಸಿದ ಮೋದಿ 99 ವರ್ಷದ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಎಂದು  ವರದಿ ಮಾಡಿದೆ.

ಗುಜರಾತ್‍ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 51 ಹಾಗೂ ಕಾಂಗ್ರೆಸ್ 39 ಸ್ಥಾನಗಳನ್ನು ಗೆದ್ದಿದ್ದವು. ಮೂರು ಸ್ಥಾನಗಳು ಪಕ್ಷೇತರರ ಪಾಲಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 8.30ಕ್ಕೆ ಅಹ್ಮದಾಬಾದ್‍ನ ಮತಗಟ್ಟೆಗೆ ಆಗಮಿಸುವ ನಿರೀಕ್ಷೆ ಇದೆ.

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್, ಪ್ರಧಾನಿಯ ತಮ್ಮ ಪಂಕಜ್ ಮೋದಿ ಜತೆ ಗಾಂಧಿನಗರದ ಹೊರವಲಯದಲ್ಲಿರುವ ರಾಯ್ಸನ್ ಗ್ರಾಮದಲ್ಲಿ ವಾಸವಿದ್ದಾರೆ. ಕಳೆದ ಜೂನ್‍ನಲ್ಲಿ ತಾಯಿಯ 99ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮೋದಿ ತಮ್ಮ ತಾಯಿಯನ್ನು ಕೊನೆಯ ಬಾರಿ ಭೇಟಿ ಮಾಡಿದ್ದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *