Breaking News

ಡಿ. . 28 ರಂದು ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ


ಬೆಂಗಳೂರು; ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ ನಡೆಯಲಿದೆ. ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವವು ಡಿಸೆಂಬರ್ 28ರಂದು ನಡೆಯಲಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *