Breaking News

ಲಾಡ್ಜ್‌ನಲ್ಲಿ ಪ್ರೇಮಿಗಳು ಆತ್ಮಹತ್ಯೆ-ನೇಣು…

ಧಾರವಾಡ ನವಲಗುಂದ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಖಾಸಗಿ ಲಾಡ್ಜ್‌ನಲ್ಲಿ ಯುವಕ, ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇವರು ಪ್ರೇಮಿಗಳು ಎಂಬ ಶಂಕೆ ವ್ಯಕ್ತವಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತ ದೇಹಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *