Breaking News

ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು : ಸಿಎಂ



ತುಮಕೂರು : ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.

ಬುಧವಾರ ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ‌ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ‌ ಚಿಕಿತ್ಸೆ ನೀಡುತ್ತಿದ್ದಾರೆ.

ಇದಕ್ಕಿಂತ ಉದಾಹರಣೆ ಮತ್ತೊಂದಿಲ್ಲ. ಡಾ: ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಯಶಸ್ಸು ಪಡೆದವರೆಲ್ಲಾ ಬದುಕಿನಲ್ಲಿ ಸಮಾಜಕ್ಕೆ ಹಿಂತಿರುಗಿಸಿ ನೀಡಬೇಕೆಂಬ ಸಣ್ಣ ಗುಣಧರ್ಮವಿದ್ದರೆ , ಈ ಜಗತ್ತು ಇನ್ನಷ್ಟು ಉತ್ತಮವಾಗುತ್ತದೆ. ಎಲ್ಲರಿಗೂ ಶ್ರೀಮಂತಿಕೆನಿರುವುದಿಲ್ಲ. ಅಂತಿಮವಾಗಿ ನಮ್ಮ ದುಡಿಮೆ, ಶ್ರೀಮಂತಿಕೆ ಸೃಷ್ಟಿಗೆ ಸೇರಿದ್ದು. ನಾವು ಸೃಷ್ಟಿಯ ಭಾಗವಷ್ಟೇ. ಭುಜಂಗಶೆಟ್ಟಿ ಯವರಿಗೆ ನಾನು ಎನ್ನುವ ಭಾವವಿಲ್ಲ. ಕೃತಿಯಲ್ಲಿ ಮಾಡುವ ದೊಡ್ಡ ಗುಣ ಅವರು ಹಾಗೂ ಅವರ ಕುಟುಂಬದವರಿಗೆ ಇದೆ ಎಂದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *