ಮೈಸೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಆಚರಣೆ ನಡಯುತ್ತಿದ್ದು, ಹಲವು ಕಡೆಗಳಲ್ಲಿ ವಿಜೃಂಭಣೆಯಿಂದ ಆಚರಣೆ ನಡೆಯುತ್ತಿದೆ. ಈ ಹಿನ್ನಲೆ ಹುಣಸೂರಿನಲ್ಲಿ ಮೂರು ದಿನಗಳ ಕಾಲ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ರಾಜ್ಯದ ಎಲ್ಲೆಡೆಯಲ್ಲಿ ಹನುಮ ಜಯಂತಿ ಆಚರಣೆಯನ್ನು ಆಚರಿಸುತ್ತಿದ್ದು, ಮೈಸೂರಿನ ಹುಣಸೂರಿನಲ್ಲೂ ಕೂಡ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಇಂದಿನಿಂದ ಮೂರು ದಿನಗಳವರೆಗೂ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಮದ್ಯ ಮುಕ್ತ ದಿನವೆಂದು ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಹುಣಸೂರು ತಾಲೂಕಿನಾದ್ಯಂತ ಮಧ್ಯ ಮಾರಾಟ ನಡೆಸುವಂತಿಲ್ಲ.
ಮಧ್ಯ ಮಾರಟ ನಿಷೇಧವಲ್ಲದೇ ಹನುಮ ಜಯಂತಿ ಪ್ರಯಕ್ತ ಹುಣಸೂರು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿ ಹನುಮ ಜಯಂತಿ ಆಚರಣೆ ಹಿನ್ನಲೆಯಲ್ಲಿ ಯಾವುದೇ ತೊಂದರೆಯಾಗದಂತೆ ಖಾಕಿ ಪಡೆಗಳು ಭಾರೀ ಬಂದೋಬಸ್ತ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

