Breaking News

ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ


ಧಾರವಾಡ   : ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದಲ್ಲಿ ನಡೆದಿದೆ.

ಅಶೋಕ ಲಾಡ್ಜ್​ನಲ್ಲಿ ಮೂರು ದಿನಗಳಿಂದ ವಾಸವಾಗಿದ್ದ ಪ್ರೇಮಿಗಳಾದ ಕುಮಾರ ತಳವಾರ (22) ಮತ್ತು ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡವರು.ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಪ್ರೇಮಿಗಳು ಬುಧವಾರ ಒಂದೇ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ.

ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ ಹಾಗೂ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಕುಮಾರ ಇಬ್ಬರು ಪ್ರೀತಿಸುತ್ತಿದ್ದರು. ಪರಿಚಯಸ್ಥರೊಬ್ಬರ ಮೂಲಕ ಲಾಡ್ಜ್​ನಲ್ಲಿ ರೂಮ್ ಪಡೆದಿದ್ದ ಪ್ರೇಮಿಗಳು ಕಳೆದ ಮೂರು ದಿನಗಳಿಂದ ತಂಗಿದ್ದರು ಎಂದು ತಿಳಿದು ಬಂದಿದೆ.

ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *