ಬೆಂಗಳೂರು: ದಲಿತರ ಬಗ್ಗೆ ತೋರಿಕೆಯ ಪ್ರೀತಿ ತೋರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಕರೆ ನೀಡಲು ಮತ್ತು ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ನೀಡಲು ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಬೃಹತ್ ‘ಐಕ್ಯತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ
ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎಚ್. ಆಂಜನೇಯ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಸದಾ ಶೋಷಿತ ವರ್ಗಗಳಿಗೆ ಬೆಂಬಲ ನೀಡುತ್ತಲೇ ಬಂದಿದೆ. ಬೇರೆ ಪಕ್ಷಗಳು ಪರಿಶಿಷ್ಟರನ್ನು ನಿರ್ಲಕ್ಷಿಸಿದ್ದು, ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಫೋಟೋ ಇಡದವರು ಇದೀಗ ಚುನಾವಣೆಗಾಗಿ ದಲಿತರನ್ನು ಓಲೈಸಲು ಮುಂದಾಗಿದ್ದಾರೆ. ದಲಿತರ ಮನೆಗಳಲ್ಲಿ ಮಲಗುತ್ತಾ, ಬೇರೆ ಹೋಟೆಲ್‌ನಿಂದ ತರಿಸಿದ ಊಟವನ್ನು ದಲಿತರ ಮನೆಯಲ್ಲಿ ತಿನ್ನುತ್ತಾ ನಾಟಕ ಮಾಡುತ್ತಿದ್ದಾರೆ. ಈ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಹೇಳಲು ಹಾಗೂ ನಿಮ್ಮ ಯೋಗಕ್ಷೇಮ ನೋಡಲು ನಾವಿದ್ದೇವೆ ಎಂದು ಹೇಳಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

