ಮುಂಬೈ: ಆದಾಯ ಮೀರಿದ ಆಸ್ತಿ ಹೊಂದಿರುವ ದೂರಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರನ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ನ್ಯಾಯಮೂರ್ತಿಗಳಾದ ಧೀರಜ್ ಠಾಕೂರ್ ಮತ್ತು ವಾಲ್ಮೀಕಿ ಮೆನೆಜೆಸ್ ಅವರಿದ್ದ ದ್ವಿಸದಸ್ಯ ಪೀಠಕ್ಕೆ ಸರ್ಕಾರಿ ಅಭಿಯೋಜಕ ಅರುಣಾ ಕಾಮತ್ ಪೈ ಈ ಮಾಹಿತಿ ನೀಡಿದರು. ಠಾಕ್ರೆ ಕುಟುಂಬದ ವಿರುದ್ಧ ಸಿಬಿಐ ಅಥವಾ ಇ.ಡಿ ತನಿಖೆ ಕೋರಿ ಗೌರಿ ಭಿಡೆ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಆಧಾರರಹಿತವಾಗಿದ್ದು, ವಜಾ ಮಾಡಬೇಕು ಎಂದು ಠಾಕ್ರೆ ಕೋರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

