ಧಾರವಾಡ: ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಎಂಇಎಸ್ ಕಾರ್ಯಕರ್ತರ ವಿರುದ್ಧ ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರದ ಮರಾಠಿಗರು ಕರ್ನಾಟಕದ ಬಸ್ಸುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿರುವ ಎಂಇಎಸ್ ಗೂಂಡಾಗಳು ಕನ್ನಡಿಗರ ಮೇಲೆಯೇ ದಬ್ಬಾಳಿಕೆ ಮಾಡುತ್ತಿದ್ದಾರೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು. ಮಹಾರಾಷ್ಟ್ರದ ಮರಾಠಿಗರು ಎಷ್ಟೇ ದಬ್ಬಾಳಿಕೆ ಮಾಡಿದರೂ ಬೆಳಗಾವಿಯ ಒಂದಿಚೂ ಜಾಗ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಇದೇ ರೀತಿ ದಬ್ಬಾಳಿಕೆ ನಡೆದಿದ್ದೇ ಆದಲ್ಲಿ ಕ್ರಾಂತಿಯಾಗಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಸಿದರು.
ಇನ್ನು ಬೆಳಗಾವಿಯಲ್ಲಿರುವ ಎಂಇಎಸ್ ಕಾರ್ಯಕರ್ತರಿಗೆ ಬೆಂಬಲ ನೀಡಲು ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಇದನ್ನೆಲ್ಲ ನೋಡಿಯೂ ನಮ್ಮ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತುಕೊಂಡಿದೆ. ಕೂಡಲೇ ರಾಜ್ಯದಲ್ಲಿ ಈ ಎಂಇಎಸ್ ಸಂಘಟನೆಯನ್ನು ವಜಾಗೊಳಿಸಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

