Breaking News

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್​


ಬೆಂಗಳೂರು: ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ.

2009ರಲ್ಲಿ ಬೇನಾಮಿ ಆಸ್ತಿ ಗಳಿಕೆ ಮಾಡಿದ ಆರೋಪ ಮೇರೆಗೆ IT ಇಲಾಖೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು 2021ರಲ್ಲಿ ಆದಾಯ ತೆರಿಗೆ ಇಲಾಖೆ ಕೇಸ್​ ದಾಖಲಿಸಿತ್ತು, ಆದ್ರೆ, 2016ರ ಕಾಯ್ದೆಯನ್ನು 2009 ರ ಕೃತ್ಯಕ್ಕೆ ಪೂರ್ವಾನ್ವಯಿಸುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಕೇಸ್ ಕ್ಲೋಸ್​ ಮಾಡಿದೆ. 2009 ರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು 2016ರ ಬೇನಾಮಿ ವ್ಯವಹಾರ ನಿರ್ಬಂಧ ಕಾಯ್ದೆಯಡಿ ಐಟಿ ಕೇಸ್ ದಾಖಲಿಸಿತ್ತು. ಆದ್ರೆ, ಸುಪ್ರೀಂ ಕೋರ್ಟ್, 2016ರ ಕಾಯ್ದೆಯನ್ನು 2009 ರ ಕೃತ್ಯಕ್ಕೆ ಪೂರ್ವಾನ್ವಯಿಸುವಂತಿಲ್ಲವೆಂದು ತೀರ್ಪು ನೀಡಿತ್ತು. ಈ ತೀರ್ಪು ಆಧರಿಸಿ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿದ್ದ ಒಟ್ಟು ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳನ್ನು ಇತ್ಯಾರ್ಥಗೊಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *