ಬಂಟ್ವಾಳ: ವಿಟ್ಲದ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಧಕ್ಕೆ ತಂದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಚಿಂತನ್, ಹೊನ್ನಯ್ಯ, ಯತಿರಾಜ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ವಿಟ್ಲ ಖಾಸಗಿ ಬಸ್ಸ್ ನಿಲ್ದಾಣದಲ್ಲಿದ್ದ ಮೂವರು ಬಸ್ ಚಾಲಕರನ್ನು ಸಾರ್ವಜನಿಕ ಸ್ಥಳವಾದ ಬಸ್ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವಾಗುವ ರೀತಿಯಲ್ಲಿ ಕಲಹ ನಡೆಸುತ್ತಿದ್ದು, ಆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

