Breaking News

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ


ಕಲಬುರಗಿ: ತಾಲೂಕಿನ ಮರಗುತ್ತಿ ಗ್ರಾಮಕ್ಕೆ ಹೊಂದಿಕೊಂಡಿರುವ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ(ಡಿ.9) ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದವ ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಎಂದು ಗುರುತಿಸಲಾಗಿದೆ. ಈತ ಮಾಲಗತ್ತಿಯ ಎಂ.ಎಂ.ಗಾರ್ಡನ್ ಬಳಿಯಲ್ಲಿ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ಹತನಾಗಿದ್ದಾನೆ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರಿಗಾಗಿ ಹುಡುಕಾಟ ನಡೆದಿದೆ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಅರುಣ ಮುರಗೊಂಡಿ ತಿಳಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *