ಧಾರವಾಡ: ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕೇಂದ್ರದ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶನಿವಾರ ವೀಕ್ಷಣೆ ಮಾಡಿದರು.
ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಪದವಿ ಪ್ರದಾನ ಸಮಾರಂಭ ಮುಗಿಸಿಕೊಂಡು ನೇರವಾಗಿ ಐಐಟಿ ಕೇಂದ್ರಕ್ಕೆ ಭೇಟಿ ನೀಡಿದ ಜೋಶಿ, ಅಲ್ಲಿನ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ ಜನೇವರಿ 1ನೇ ತಾರೀಖಿಗೆ ಕಾಮಗಾರಿ ಪೂರ್ಣಗೊಳಿಸಿ ರೆಡಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಐಐಟಿ ಕೇಂದ್ರದ ಉದ್ಘಾಟನೆ ಸಂಬಂಧ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿದ್ದೇನೆ. ಕಟ್ಟಡ ಉದ್ಘಾಟನೆಗೆ ರೆಡಿ ಇದ್ದರೆ ಉದ್ಘಾಟನೆಗೆ ಆಗಮಿಸುವುದಾಗಿ ಪ್ರಧಾನಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಜನೇವರಿ 1ನೇ ತಾರೀಖಿಗೆ ಕಟ್ಟಡ ರೆಡಿ ಇರಬೇಕು ಎಂದು ಸೂಚನೆ ಕೊಟ್ಟಿದ್ದೇನೆ. ಜನೇವರಿ ಮೊದಲ ವಾರದಲ್ಲಿ ಪ್ರಧಾನಿಗಳನ್ನು ಕರೆಯಿಸುವ ವಿಚಾರದಲ್ಲಿದ್ದೇವೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಶಾಸಕ ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸ, ಐಐಟಿ ನೂತನ ನಿರ್ದೇಶಕ ದೇಸಾಯಿ ಅವರು ಕೂಡ ಐಐಟಿ ಕೇಂದ್ರಕ್ಕೆ ಭೇಟಿ ನೀಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

