Breaking News

ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಇರುವುದಿಲ್ಲ :
ನಿತೀಶ್‌ ಕುಮಾರ್‌

ಪಾಟ್ನಾ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಇರುವುದಿಲ್ಲ. ಪ್ರಧಾನ ರಂಗವೇ ಇರುತ್ತದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಪಾಟ್ನಾದಲ್ಲಿ ಭಾನುವಾರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ಮರೆತು ಒಗ್ಗೂಡಿದಾಗ ಮಾತ್ರ ಬಹುಮತ ಸಾಧ್ಯ ಎಂದರು.
ಪ್ರತಿಪಕ್ಷಗಳ ಒಕ್ಕೂಟ ರಚನಗೆ ತಾವೂ ಕೂಡ ಶ್ರಮಿಸುವುದಾಗಿ ಹೇಳಿದ್ದಾರೆ. 2020ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಯು ವಿರುದ್ಧ ಕೆಲಸ ಮಾಡಿತ್ತು ಎಂದು ಆರೋಪಿಸಿದ್ದಾರೆ.

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಮನವಿ ಸಲ್ಲಿಸಿದರೂ, ಅದಕ್ಕೆ ಸೂಕ್ತ ಸ್ಪಂದನೆ ಸಿಕ್ಕಿಲ್ಲವೆಂದು ನಿತೀಶ್‌ ದೂರಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *