ವಿಜಯಪುರ: ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಬೆಳಗ್ಗೆ ವಿಜಯಪುರ ತಾಲ್ಲೂಕಿನ ಅತಾಲಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜು ಗರುಡ್ಕರ ಹತ್ಯೆಯಾಗಿರುವ ವ್ಯಕ್ತಿ.
ರಾಜು ಗರುಡ್ಕರ ಅವರು ಎಲ್ಲಿಗೆ ಹೋಗುತ್ತಿದ್ದರು ಎಂದು ತಿಳಿದುಬಂದಿಲ್ಲ. ರಸ್ತೆಯಲ್ಲಿ ಸಾಗುತ್ತಿದ್ದಾಗ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾರೆ.
ಏಕಾಏಕಿ ಬಿದ್ದ ಹೊಡೆತದಿಂದ ತತ್ತರಿಸಿದ ರಾಜು ಅಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

