ಹುಬ್ಬಳ್ಳಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಾಲಕ ಅಮರಗೋಳದಿಂದ ಹುಬ್ಬಳ್ಳಿಯತ್ತ ಅತಿವೇಗವಾಗಿ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ರೋಡ್ ಡಿವೈಡರ್‌ಗೆ ರಭಸವಾಗಿ ಗುದ್ದಿದ್ದರಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳು ಚಾಲಕನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಈ ಘಟನೆ ಸಂಬಂಧವಾಗಿ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

