ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಸಾಕಷ್ಟು ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್ಎಸ್‌ಯುಐ ಸಂಘಟನೆ ಕಾರ್ಯಕರ್ತರು ಡಿ.17 ರಂದು ರಾಜ್ಯದಾದ್ಯಂತ ಎಲ್ಲಾ ಕಾಲೇಜುಗಳಿಗೆ ಬಂದ್ ಕರೆ ಕೊಟ್ಟಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖ್ಯಸ್ಥ ಹಾಗೂ ಕವಿವಿ ಸಿಂಡಿಕೇಟ್ ಸದಸ್ಯ ರವಿ ಮಾಳಗೇರ, ಯುಯುಸಿಎಸ್ ಎಂಬ ಪದ್ಧತಿ ಜಾರಿಗೆ ತಂದ ಮೇಲೆ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸಾಕಷ್ಟು ವಿಳಂಬವಾಗುತ್ತಿದೆ. ವಿದ್ಯಾರ್ಥಿಗಳು ಮೂರನೇ ಸೆಮಿಸ್ಟರ್‌ಗೆ ಹೋದರೂ ಅವರಿಗೆ ಇನ್ನೂ ಮೊದಲ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ನೀಡಿಲ್ಲ. ಕವಿವಿಯಿಂದ ವಿದ್ಯಾರ್ಥಿ ವೇತನಕ್ಕೆ ಸಾಕಷ್ಟೂ ಸಮಸ್ಯೆಯಾಗುತ್ತಿದೆ ಹಾಗೂ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಯಲ್ಲೂ ಅನ್ಯಾಯ ಆಗುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಜ್ಯದಾದ್ಯಂತ ಡಿ.17ಕ್ಕೆ ಕಾಲೇಜುಗಳ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

