Breaking News

ತಡಕೋಡ ಗ್ರಾಮದಲ್ಲಿ ಬಸ್‌ಗೆ ಆಗ್ರಹಿಸಿ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಧಾರವಾಡ: ತಾಲೂಕಿನ ತಡಕೋಡ ಗ್ರಾಮದಲ್ಲಿ ಬಸ್ಸಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲೇ ಟೈರ್‌ಗೆ ಬೆಂಕಿ ಹಚ್ಚಿ ಕೆಎಸ್‌ಆರ್‌ಟಿಸಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ದಿನನಿತ್ಯ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬಸ್ಸಿನ ಸೌಕರ್ಯವಿಲ್ಲದೇ ಪರದಾಡುವಂತಾಗಿದೆ. ಬಸ್ಸುಗಳಿದ್ದರೂ ಅವುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ.

ಈ ಸಮಸ್ಯೆಯನ್ನು ಹಲವು ಬಾರಿ ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಕ್ಯಾರೆ ಎಂದಿಲ್ಲ ಎಂದು ಆಕ್ರೋಶಗೊಂಡ ಸ್ಥಳೀಯರು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಬಂದು ಗ್ರಾಮಸ್ಥರ ಅಹವಾಲು ಆಲಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *