ಮೈಸೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗುತ್ತಿದ್ದೇನೆ. ಈ ವಿಷಯದ ನಂತರ ಸಚಿವ ಸಂಪುಟ ವಿಸ್ತರಣೆ ವಿಚಾರ ಬಂದರೆ ಚರ್ಚೆ ಮಾಡುತ್ತೇವೆ. ಅದಕ್ಕಾಗಿ ಸಿದ್ಧತೆ ಮಾಡಿಕೊಂಡು ಹೋಗಿರುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಗೃಹ ಸಚಿವರು ಗಡಿವಿವಾದದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ. ಈಗಾಗಲೇ ರಾಜ್ಯ ಪುನರ್ ವಿಂಗಡನಾ ಕಾಯ್ದೆ, ಪ್ರಕ್ರಿಯೆ, ಸುಪ್ರೀಂ ಕೋರ್ಟ್ ಪ್ರಕರಣ ಸೇರಿದಂತೆ ಎಲ್ಲಾ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಲಿದ್ದೇನೆ. ಸಂವಿಧಾನದಲ್ಲಿನ ಅವಕಾಶಗಳು ಮತ್ತು 2004ರ ಪ್ರಕರಣ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡೇ ಇಲ್ಲ ಎಂಬ ಬಗ್ಗೆ ಗೃಹ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಡಲಿದ್ದೇನೆ ಎಂದರು.
ಚಾಮರಾಜನಗರ ಜಿಲ್ಲೆಯೂ ಕೂಡ 31 ಜಿಲ್ಲೆಗಳ ಪೈಕಿ ಮಹತ್ವದ ಜಿಲ್ಲೆ. ನಿಸರ್ಗಭರಿತ, ಐತಿಹಾಸಿಕ ಗಡಿ ಜಿಲ್ಲೆಯಾಗಿದೆ. ಅಭಿವೃದ್ಧಿಗೆ ಮಹತ್ವ ಕೊಟ್ಟೇ ಕೊಡುತ್ತೇವೆ. ಮುಖ್ಯಮಂತ್ರಿಯಾದ ನಂತರ ಮೂರನೇ ಬಾರಿಗೆ ಜಿಲ್ಲೆ ಭೇಟಿ ನೀಡುತ್ತಿದ್ದೇನೆ ಎಂದು ಜಿಲ್ಲೆಗೆ ಬಂದರೆ ಅಧಿಕಾರ ಹೋಗುತ್ತೆ ಎಂಬ ಮೌಢ್ಯದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

