ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿಯೇ ಸುಮಾರು 100 ಮಂದಿ ಅಲ್ಪಸಂಖ್ಯಾತ ಸಮುದಾಯದ ಟಿಕೆಟ್ ಆಕಾಂಕ್ಷಿಗಳು ಕೈ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಹಂಚಿಕೆ ಕುರಿತಂತೆಯೂ ಚರ್ಚಿಸಲಾಗಿದ್ದು, ಹೈಕಮಾಂಡ್‌ಗೂ ಮನವಿ ಮಾಡಲಾಗುವುದು ಎಂದು ಹೇಳಿದರು.
ಒಂದು ಕಾಲದಲ್ಲಿ 17 ಮಂದಿ ಅಲ್ಪಸಂಖ್ಯಾತರು ಗೆದ್ದಿರುವ ಉದಾಹರಣೆಯಿದೆ. ಆದರೆ ಇದೀಗ ಅದು ಎರಡಂಕೆಯನ್ನೂ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಪ ಸಂಖ್ಯಾತ ಸಮುದಾಯದವರಿಗೆ ಹೆಚ್ಚಿನ ಟಿಕೆಟ್ ನೀಡುವುದು ಸೇರಿ ಹಲವು ವಿಚಾರಗಳನ್ನು ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಒಟ್ಟು ಐದು ವಲಯಗಳಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸಮಾವೇಶದ ವೇಳಾ ಪಟ್ಟಿ ಅಂತಿಮಗೊಳಿಸಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

