Breaking News


ಇಂದು ಧಾರವಾಡಕ್ಕೆ ಸಿಎಂ ಆಗಮನ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರ ಇಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಕಯಾಗಲಿದ್ದಾರೆ.

ಇಂದು ಬೆಳಿಗ್ಗೆ 10-30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪದ ರೇಣುಕಾ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಏರ್ಪಡಿಸಿರುವ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12-30 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪ, ಸಪ್ತಗಿರಿ ಲೇಔಟ್, ವಿದ್ಯಾನಿಕೇತನ ಪಿಯು ವಿಜ್ಞಾನ ಮಹಾವಿದ್ಯಾಲಯಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಡೆನಿಸನ್ಸ್ ಹೊಟೇಲ್‍ಗೆ ತೆರಳುವರು. ನಂತರ ಮಧ್ಯಾಹ್ನ 1-30 ಗಂಟೆಗೆ ಹುಬ್ಬಳ್ಳಿ ವಿಮಾನದ ಮೂಲಕ ನವದೆಹಲಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೈರಿದೇವರಕೊಪ್ಪದ ರೇಣುಕಾನಗರದಲ್ಲಿ ಮುಖ್ಯಮಂತ್ರಿಗಳು ನಮ್ಮ ಕ್ಲಿನಿಕ್ ಉದ್ಘಾಟಿಸಲಿದ್ದಾರೆ. ಎಲ್ಲ 438 ನಮ್ಮ ಕ್ಲಿನಿಕ್‍ಗಳನ್ನು ವರ್ಚುವಲ್ ಮೂಲಕ ಏಕಕಾಲಕ್ಕೆ ಚಾಲನೆ ನೀಡಲಿದ್ದಾರೆ. ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಎಲ್ಲ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *