ಹುಬ್ಬಳ್ಳಿ: ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದರು. ನಂತರ ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕೆನಾಲ್ ಗೆ ಗೋಡೆ ಕಟ್ಟಿದ್ದೆ ಕಾಂಗ್ರೆಸ್. ಇದು ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ. ಹೋರಾಟದ ವೇಳೆ ರಕ್ತದಲ್ಲಿ ಪತ್ರ ಬರೆದಿದ್ದರಿಂದ ಐದು ಕಿ.ಮೀ ಕೆನಾಲ್ ಅನ್ನು ನಾನು ನೀರಾವರಿ ಸಚಿವನಾಗಿದ್ದಾಗ ನಿರ್ಮಿಸಿದ್ದೇನೆ. ಕಾಂಗ್ರೆಸ್ ನವರಿಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಟಕಿದರು.
ದೆಹಲಿ ಪ್ರವಾಸದ ಕುರಿತು ಮಾತನಾಡಿದ ಅವರು, ದೆಹಲಿಯಲ್ಲಿ ಗೃಹ ಸಚಿವರು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಸಿಎಂಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಾಗುವುದು. ಇನ್ನು ಈ ಗಡಿ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇರುವ ಕಾರಣ ಅದರ ಬಗ್ಗೆ ವ್ಯಾಖ್ಯಾನ ಮಾಡುವುದಿಲ್ಲ ಎಂದರು.
ಬಡವರಿಗೆ ಉತ್ತಮ ಪ್ರಾಥಮಿಕ ಚಿಕಿತ್ಸೆ ನೀಡಲು ಧಾರವಾಡ ಜಿಲ್ಲೆಯಲ್ಲಿ 7 ನಮ್ಮ ಕ್ಲಿನಿಕ್ ಉದ್ಘಾಟನೆ ಮಾಡಲಿದ್ದೇನೆ. ಅದರಂತೆ ರಾಜ್ಯದಾದ್ಯಂತ ಒಂದನೇ ಹಂತದಲ್ಲಿ ನೂರು ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಇದನ್ನು ಉತ್ತೇಜಿಸಲು ಮುಂದಿನ ಬಜೆಟ್ ನಲ್ಲಿ ಹಣ ಮೀಸಲು ಇಡಲಾಗುವುದು. ಟೆಲಿಮೆಡಿಸನ್, ರಕ್ತಪರಿಕ್ಷೇ ಸೇರಿದಂತೆ ಇನ್ನಿತರ ಪರೀಕ್ಷೆಗಳು ಆಸ್ಪತ್ರೆಯಲ್ಲಿ ಲಭ್ಯ ಇರಲಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

