ಬೆಂಗಳೂರು: ಡಿಸೆಂಬರ್ 19ರಿಂದ 2 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಒಂದರಿಂದ ಎರಡು ಸೆಂ ಮೀ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲಡೆ ಮಳೆ ಹೆಚ್ಚಾಗಿತ್ತು. ಅದರಿಂದ ನಿರಂತರವಾಗಿ ಮಳೆ, ಚಳಿ ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

