Breaking News

ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಹುಟ್ಟುಹಬ್ಬ : ಸಿದ್ದರಾಮಯ್ಯ, ಡಿಕೆಶಿ ಆಗಮನ



ಕುಷ್ಟಗಿ: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ.

ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಬಯ್ಯಾಪುರ ಅವರ ಹುಟ್ಟುಹಬ್ಬದ ಆಚರಣೆ ಹಾಗೂ ಕೈ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯ ಕೇಂದ್ರ ಬಿಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಆಗಿದ್ದಾರೆ. ಇವರಿಬ್ಬರೂ ಬೆಂಗಳೂರಿನ ಜಕ್ಕೂರುನಿಂದ ಹೆಲಿಕಾಪ್ಟರ್ ಮೂಲಕ ಕುಷ್ಟಗಿ ಸಮೀಪದ ಬೀರಲದಿನ್ನಿ ತಾತ್ಕಾಲಿಕ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ಕುಷ್ಟಗಿ ಮುಖ್ಯರಸ್ತೆಯಲ್ಲಿ ಸಿಂಧನೂರು ರಸ್ತೆಯ ಟಿಎಪಿಸಿಎಂಎಸ್ ಮೈದಾನದ ಬೃಹತ್ ವೇದಿಕೆಗೆ ಆಗಮಿಸಿ ಶಾಸಕ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡುವರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *