Breaking News

ನಾಳೆ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ


ಮಂಗಳೂರು: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ.

ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿ ಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ಸಚಿವ ಆನಂದ್‌ ಸಿಂಗ್‌ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *