ಗದಗ: ಕಾಂಗ್ರೆಸ್ ನ ಮಾಜಿ ಶಾಸಕ ಶಂಕರಗೌಡ ಎನ್ ಪಾಟೀಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಮ್ಮ 81 ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದ ಇವರು ಗುರುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಪಾಟೀಲ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಇದರ ಕಾರಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1989-1994ರ ಅವಧಿಯಲ್ಲಿ ಶಂಕರಗೌಡ ಅವರು ಕಾಂಗ್ರೆಸ್ ನಿಂದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಸರಳ ನಡೆ-ನುಡಿ, ನೇರ ವ್ಯಕ್ತಿತ್ವ ಹೊಂದಿದ್ದ ಶಂಕರಗೌಡ ಅವರು ಎಲ್ಲಾ ಪಕ್ಷದವರ ಜೊತೆಗೆ ಅನ್ಯೋನ್ಯತೆ ಹೊಂದಿದ್ದರು.
ಸರಳ ವ್ಯಕ್ತಿಯಾಗಿದ್ದ ಪಾಟಿಲ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಗುರುವಾರ ಸಂಜೆ ನಾಲ್ಕು ಗಂಟೆಗೆ ಅವರ ಸ್ವಗ್ರಾಮವಾದ ಪುಟಗಂವ ಬಡ್ನಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ಪಾಟೀಲರ ಅಂತಿಮ ದರ್ಶನಕ್ಕೆ ಅಭಿಮಾನಿಗಳು ಆಗಮಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

