Breaking News

ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ-ಯಾರಿಗೆ ಒಲಿಯಲಿದೆ ಗದ್ದುಗೆ ?

ನವಲಗುಂದ: ಪುರಸಭೆ ನೂತನ ಅಧ್ಯಕ್ಷರ ಆಯ್ಕೆಗಾಗಿ ಶನಿವಾರ (ಡಿಸೆಂಬರ್ 17ರಂದು) ಚುನಾವಣೆ ಜರುಗಲಿದ್ದು, ಪುರಸಭೆ ಅಧ್ಯಕ್ಷ ಪಟ್ಟ ಯಾರಿಗೆ ದೊರೆಯಲಿದೆ ಎಂಬ ಕುತೂಹಲ ನವಲಗುಂದದ ಜನರಲ್ಲಿ ಹೆಚ್ಚಾಗಿದೆ.

ಈ ಮೊದಲಿದ್ದ ಪುರಸಭೆ ಅಧ್ಯಕ್ಷ ಅಪ್ಪಣ್ಣ ಹಳ್ಳದ ಅವರ ರಾಜೀನಾಮೆಯಿಂದ ಖಾಲಿ ಉಳಿದ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿದ್ದು, ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಪುರಸಭೆ ಒಟ್ಟು 23 ಸದಸ್ಯರನ್ನು ಹೊಂದಿದ್ದು, ಅತೀ ಹೆಚ್ಚು ಅಂದರೆ 17 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ಸಿನಲ್ಲಿ ಒಬ್ಬ ಸದಸ್ಯರು ಮರಣ ಹೊಂದಿದ್ದರಿಂದ ಸದ್ಯ 16 ಸದಸ್ಯರ ಬಲವಿದ್ದು, ಬಿಜೆಪಿ 6 ಸದಸ್ಯರನ್ನು ಹೊಂದಿದೆ. ಆದರೆ ಕಾಂಗ್ರೆಸ್ ಪಕ್ಷವೇ ಗದ್ದುಗೆ ಹಿಡಿಯುವ ಸಾಧ್ಯತೆ ಹೆಚ್ಚು, ಎನ್ನಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *