Breaking News

ಭಾರತೀಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಬೇಕು : ಡಾ.ಎ.ಎಂ.ಡಿಕ್ರೂಜ್


ಹುಬ್ಬಳ್ಳಿ: ಸರ್ಕಾರ ನೈಋತ್ಯ ರೈಲ್ವೆ ವಲಯದಲ್ಲಿನ ಹಾಗೂ ಭಾರತೀಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಬೇಕು. ಅಲ್ಲದೇ ನೈಋತ್ಯ ರೈಲ್ವೆ ಮಜ್ದೂರ್ ಯುನಿಯನ್ ಸದಸ್ಯರ ಹಾಗೂ ಎಸ್.ಡಬ್ಲೂ.ಆರ್ ಸಿಬ್ಬಂದಿಗಳ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ಎಸ್ ಡಬ್ಲು ಆರ್ ಎಂ ಯು ಮುಖ್ಯಸ್ಥ ಡಾ.ಎ.ಎಂ.ಡಿಕ್ರೂಜ್ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ನಾವು ಹೋರಾಟ ಮಾಡುತ್ತಲೇ ನಮ್ಮ ಹಕ್ಕುಗಳನ್ನು ಪಡೆಯುತ್ತಾ ಬಂದಿದ್ದೇವೆ. ಆದರೆ ಸರ್ಕಾರ ಮಾತ್ರ ಸೌಲಭ್ಯಗಳನ್ನು ಒದಗಿಸಲು ಮೀನಾಮೇಷ ಎಣಿಸುತ್ತಿದೆ ಎಂದರು.

ಈಗಾಗಲೇ ಡಿಎ ನೀಡುವಲ್ಲಿ ಎಸ್.ಡಬ್ಲೂ.ಆರ್ ಸಾಕಷ್ಟು ವಿಳಂಬ ಮಾಡುವ ಮೂಲಕ ಸಿಬ್ಬಂದಿಗಳಿಗೆ ಸಮಸ್ಯೆ ತಂದೊಡ್ಡಿದೆ. ಈ ಬಗ್ಗೆ ಹೋರಾಟ ಮಾಡಿದ ಬಳಿಕವೇ ಬಿಡುಗಡೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಡಿಎ ನೀಡಲು ಲಾಕ್ ಡೌನ್ ಸಂದರ್ಭದಲ್ಲಿ ಪ್ರಯಾಣಿಕರ ರೈಲು ಸ್ಥಗಿತ ಮಾಡಿರುವ ಉದಾಹರಣೆ ಹೇಳಿದ್ದಾರೆ. ಆದರೆ ಸರಕು ಸಾಗಣೆ ರೈಲುಗಳನ್ನು ಓಡಿಸುವ ಮೂಲಕ ಆದಾಯವನ್ನು ತಂದುಕೊಟ್ಟಿದೆ. ಆದರೆ ಇದನ್ನು ನೈಋತ್ಯ ರೈಲ್ವೆ ಇಲಾಖೆ ಮರೆತಿದೆ. ಈ ನಿಟ್ಟಿನಲ್ಲಿ ಕೂಡಲೇ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *