ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ಕೊಟ್ಟ ಪಾಕಿಸ್ತಾನದ ಸಚಿವ ಭಿಲಾವಲ್ ಭುಟ್ಟೋ ಅವರ ವಿರುದ್ಧ ಧಾರವಾಡದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡದ ವಿವೇಕಾನಂದ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಭುಟ್ಟೋ ಹಾಗೂ ಪಾಕಿಸ್ತಾನ ಧ್ವಜದ ಪೋಸ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಇನ್ನೂ ಜೀವಂತವಾಗಿದ್ದಾನೆ ಎಂಬ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಭುಟ್ಟೋ ನೀಡಿದ್ದು, ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಭುಟ್ಟೋ ಹೇಳಿಕೆ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಭುಟ್ಟೋ ಅವರ ಭಾವಚಿತ್ರ ಹಾಗೂ ಪಾಕಿಸ್ತಾನ ಧ್ವಜದ ಪೋಸ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

