Breaking News

ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಡಗ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ, ಪ್ರತ್ಯೇಕ ಪರಿಶಿಷ್ಟ ಜಾತಿ, ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದ್ದಾರೆ.

ಇನ್ನೂ ಈ ನಿಗಮಕ್ಕೆ 8 ಹುದ್ದೆಗಳನ್ನು ಸೃಜಿಸಲಾಗಿದೆ. ನಾಲ್ಕು ಹುದ್ದೆಗಳನ್ನು ನಿಯೋಜನೆ ಮೇಲೆ ನೇಮಕಾತಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಮಿಕ್ಕ ಡಾಟಾ ಎಂಟ್ರಿ ಆಪರೇಟರ್, ವಾಹನ ಚಾಲಕರು ಹಾಗೂ ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *