ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಕೆ
ಬೆಂಗಳೂರು : ಕರ್ನಾಟಕ ಸರ್ಕಾರ ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೆ. ಶ್ರೀನಿವಾಸ್ ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದರು.
ಕರ್ನಾಟಕ ಸರ್ಕಾರ ಶನಿವಾರ ರಾತ್ರಿ ಹೊಸ ಜಿಲ್ಲಾಧಿಕಾರಿ ನೇಮಕದ ಕುರಿತು ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಆಯುಕ್ತರಾಗಿದ್ದ ಕೆ. ಎ. ದಯಾನಂದ (ಐಎಎಸ್ 2012ನೇಬ ಬ್ಯಾಚ್) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೂತನ ಡಿಸಿಯಾಗಿ ನೇಮಕ ಮಾಡಲಾಗಿದೆ.
ಕೆ. ಎ. ದಯಾನಂದ ಎರಡನೇ ಬಾರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ದಯಾನಂದ ಬೆಂಗಳೂರು ನಗರ ಡಿಸಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿರುವ ಕೆ. ಎ. ದಯಾನಂದ ಸದ್ಯ ಹಿಂದುಳಿದ ವರ್ಗಗಳ ಆಯುಕ್ತರಾಗಿದ್ದರು. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

