ಬೆಂಗಳೂರು : ಜಿಲ್ಲೆಯ ಪ್ರತಿ ಗ್ರಾಮಗಳನ್ನು ಸಂಪೂರ್ಣ ಸ್ವಾವಲಂಬಿ ಮತ್ತು ಮಾದರಿ ಗ್ರಾಮಗಳನ್ನಾಗಿಸುವ ವಿನೂತನ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ, ಕೋರಮಂಗಲ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಎಂಬ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಜನಸಾಮಾನ್ಯರು ಅಧಿಕಾರಿಗಳ ಬಳಿ ಅಥವಾ ವಿವಿಧ ಇಲಾಖೆಗಳಿಗೆ ಹೋಗುವ ಅಗತ್ಯವಿಲ್ಲ. ಬದಲಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಗ್ರಾಮಗಳಿಗೆ ಭೇಟಿ ನೀಡುವುದರಿಂದ, ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ವಿನೂತನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

