Breaking News

ಪುಡಿ ರೌಡಿಗಳ ಅಟ್ಟಹಾಸ : ವ್ಯಾಪಾರಿಗಳ ಮೇಲೆ ಹಲ್ಲೆಗೆ ಯತ್ನ


ಬೆಂಗಳೂರು: ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ಹಫ್ತಾ ನೀಡದ ಕಾರಣ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದಾರೆ. ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನಿಸಲಾಗಿದೆ. ಬಾಣಸವಾಡಿಯ ಜೈಭಾರತ್ ನಗರದಲ್ಲಿ ಘಟನೆ ನಡೆದಿದೆ.

ಸುರೇಶ್ ಎಂಬಾತ ಹಫ್ತಾ ಕೇಳಿದ್ದು, ಕೊಡದ ಕಾರಣ ಲಾಂಗ್ ಬೀಸಿ ಆತನನ್ನು ಬೆದರಿಸಿ ಪುಡಿರೌಡಿಗಳು ಪುಂಡಾಟಿಕೆ ಮೆರೆದಿದ್ದಾರೆ. ನಿನ್ನೆ ರಾತ್ರಿ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಬಾಣಸವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *