Breaking News

ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುವಾಹಟಿ: ಇನ್ನೆರಡು ತಿಂಗಳುಗಳಲ್ಲಿ ಚುನಾವಣೆ ಎದುರಿಸಲಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಉದ್ಘಾಟನೆಯಾಲಿರುವ ಈ 6,800 ಕೋಟಿ ರೂಪಾಯಿಯ ಯೋಜನೆಗಳಲ್ಲಿ ವಸತಿ, ರಸ್ತೆ, ಕೃಷಿ, ದೂರಸಂಪರ್ಕ, ಐಟಿ, ಪ್ರವಾಸೋದ್ಯಮ ಮತ್ತು ಆತಿಥ್ಯ ಸೇರಿದಂತೆ ಹಲವು ಕ್ಷೇತ್ರಗಳು ಒಳಗೊಳ್ಳಲಿವೆ.

ಪ್ರಧಾನಿ ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಗರ್ತಲಾದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ‘ಗೃಹ ಪ್ರವೇಶ’ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಇತ್ತೀಚೆಗಷ್ಟೇ ಗುಜರಾತ್‌ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ. ತ್ರಿಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *